Greater Bengaluru Authority Violates Act: Second Meeting Delayed Beyond Mandatory Deadline
Kere Manjunath ಕೆರೆ ಮಂಜುನಾಥ್
BENGALURU: Just four months after its inception, the Greater Bengaluru Authority (GBA) has come under scrutiny for violating its own governing statutes. Despite a clear legal mandate to hold periodic reviews, the Authority has failed to convene its second board meeting within the prescribed timeframe.
A Breach of Statutory Obligations
Under Section 12 of Chapter 3 of the Greater Bengaluru Governance Act (GBGA), the Chairperson of the GBA is required to convene a meeting at least once every three months.
The GBA was formally established on September 2, 2025, and held its inaugural meeting under the chairmanship of Chief Minister Siddaramaiah on October 10, 2025. According to the Act, the subsequent meeting should have taken place no later than January 10, 2026. However, as of today, no preparations for this mandatory session appear to be underway.
Stagnation Despite Structural Reforms
The first meeting focused on critical foundational steps, including the appointment of officials and the delegation of planning authority responsibilities. To further streamline governance, the GBGA was recently amended to include high-ranking officials—such as the Chief Secretary, the Additional Chief Secretary of Urban Development, and Finance Department representatives—as board members.
While these changes were intended to accelerate decision-making for Bengaluru’s urban development, critics argue that the structural reforms are meaningless if the board fails to meet.
Provisions for Leadership Absence
The Act provides clear alternatives to ensure continuity in governance. In the absence of the Chief Minister, the Vice-Chairperson—Deputy Chief Minister and Bengaluru Development Minister D.K. Shivakumar—is empowered to preside over the meetings. Furthermore, the law allows attending members to elect a temporary chair from among themselves to conduct business if both the Chair and Vice-Chair are unavailable.
Despite these provisions, neither the top leadership nor the council of ministers and MLAs have shown the necessary initiative to push for the meeting, leading to a direct violation of the Act. One city minister reportedly remarked, "The decision to hold the GBA meeting rests with the Deputy CM; after all, he is the minister-in-charge of Bengaluru."
Transparency Concerns
The GBA is also facing criticism for a lack of transparency. Clause 6 of Section 12 stipulates that minutes and summary notes of every meeting must be recorded and made available to the public within three days of the session.
More than three months after the initial meeting on October 10, 2025, no official records or decisions from that session have been released to the public.
"The meeting should have been conducted. We will coordinate with the Chief Minister and Deputy Chief Minister to schedule the GBA meeting immediately."
Maheshwar Rao, Chief Commissioner, GBA
Greater Bengaluru Authority Violates Act ನಾಲ್ಕೇ ತಿಂಗಳಲ್ಲಿ ಜಿಬಿಎ ಕಾಯ್ದೆ ಉಲ್ಲಂಘನೆ
ALSO Read… GBA to Control over city administration ಜಿಬಿಎ ರಚನೆ; ನಗರ ಆಡಳಿತದ ಮೇಲೆ ಹಿಡಿತ
ALSO read….. 450 wards in five municipal corporations… ಐದು ನಗರ ಪಾಲಿಕೆಗಳಲ್ಲಿ 450 ವಾರ್ಡ್
Work of 5 City Corporations under GBA… ಜಿಬಿಎ ನಿಗಾದಡಿ 5 ನಗರ ಪಾಲಿಕೆಗಳ ಕಾರ್ಯ
Also READ… Administrative Structure of the 5 City corporations… 5 ನಗರ ಪಾಲಿಕೆಗಳ ಆಡಳಿತ ಯಂತ್ರ ಹೇಗಿದೆ?
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮೂರು ತಿಂಗಳೊಳಗೆ ನಡೆಯದೆ ಎರಡನೇ ಜಿಬಿಎ ಸಭೆ
ನಾಲ್ಕೇ ತಿಂಗಳಲ್ಲಿ ಜಿಬಿಎ ಕಾಯ್ದೆ ಉಲ್ಲಂಘನೆ
Kere Manjunath ಕೆರೆ ಮಂಜುನಾಥ್
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾಗಿ ನಾಲ್ಕೇ ತಿಂಗಳಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ (ಜಿಬಿಜಿಎ) ಉಲ್ಲಂಘನೆಯಾಗಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸುವುದನ್ನು ಜಿಬಿಎ ಮರೆತುಹೋಗಿದೆ.
ಜಿಬಿಜಿಎಯ ಅಧ್ಯಾಯ–3ರ ಪ್ರಕರಣ 12ರ ಪ್ರಕಾರ, ‘ಜಿಬಿಎ ಅಧ್ಯಕ್ಷರು ಪ್ರತಿ ಮೂರು ತಿಂಗಳಿಗೆ ಕನಿಷ್ಠ ಒಂದು ಬಾರಿ ಜಿಬಿಎ ಸಭೆ ಕರೆಯಬೇಕು’. ಜಿಬಿಎಯ ಮೊದಲ ಸಭೆ 2025ರ ಅಕ್ಟೋಬರ್ 10ರಂದು ನಡೆದಿತ್ತು. 2026ರ ಜನವರಿ 10ರೊಳಗೆ ಕನಿಷ್ಠ ಒಂದು ಸಭೆಯನ್ನಾದರೂ ನಡೆಸಬೇಕಿತ್ತು. ಆದರೆ ಈ ಸಭೆ ಬಗ್ಗೆ ಇನ್ನೂ ತಯಾರಿಯೇ ನಡೆದಿಲ್ಲ.
2025ರ ಸೆಪ್ಟೆಂಬರ್ 2ರಂದು ರಚನೆಯಾದ ಜಿಬಿಎಯ ಅಧ್ಯಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅ.10ರಂದು ನಡೆದಿದ್ದ ಮೊದಲ ಸಭೆಯಲ್ಲಿ, ಜಿಬಿಎಗೆ ಅಧಿಕಾರಿಗಳ ನೇಮಕ, ಯೋಜನಾ ಪ್ರಾಧಿಕಾರದ ಜವಾಬ್ದಾರಿಯನ್ನು ನೀಡಲಾಗಿತ್ತು. ತದ ನಂತರ ಜಿಬಿಎ ಸಭೆ ನಡೆದಿಲ್ಲ. ಮೂರು ತಿಂಗಳಿಗೆ ಕನಿಷ್ಠ ಒಂದು ಸಭೆ ನಡೆಯಬೇಕೆಂದು ಕಾಯ್ದೆಯಲ್ಲಿದೆ. ಅಂದರೆ, ನಗರ ಅಭಿವೃದ್ಧಿಗಾಗಿ ಒಂದಕ್ಕಿಂತ ಎಷ್ಟಾದರೂ ಸಭೆಯನ್ನು ನಡೆಸಬಹುದು. ಆದರೆ, ನಗರ ಅಭಿವೃದ್ಧಿಯ ಯೋಜನೆಗಳತ್ತ ರಾಜ್ಯದ ಚುಕ್ಕಾಣಿ ಹಿಡಿದಿದವರು ದೃಷ್ಟಿ ಹರಿಸಿಲ್ಲ.
ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆರ್ಥಿಕ ಇಲಾಖೆ ಸೇರಿದಂತೆ ಹಲವು ಅಧಿಕಾರಿಗಳನ್ನು ಜಿಬಿಎ ಸದಸ್ಯರನ್ನಾಗಿ ನೇಮಿಸಿಕೊಳ್ಳಲು ಜಿಬಿಜಿಎಗೆ ತಿದ್ದುಪಡಿಯನ್ನೂ ತರಲಾಗಿದೆ. ಇದರಿಂದ ಜಿಬಿಎ ಸಭೆಯಲ್ಲಿ ನಿರ್ಧಾರವಾಗುವ ವಿಷಯಗಳಿಗೆ ಹೆಚ್ಚಿನ ವೇಗ ಸಿಗುತ್ತದೆ ಎಂಬ ಉದ್ದೇಶವಿದೆ. ಆದರೆ, ಸಭೆಯೇ ನಡೆದೆ ಯಾವ ಉದ್ದೇಶವೂ ಈಡೇರುವಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.
ಜಿಬಿಜಿಎಯಂತೆ ಮುಖ್ಯಮಂತ್ರಿ ಅನುಪಸ್ಥಿತಿಯಲ್ಲಿ ಜಿಬಿಎ ಉಪಾಧ್ಯಕ್ಷ ಸಭೆಯ ಅಧ್ಯಕ್ಷತೆಯನ್ನು ವಹಿಸಬಹುದು. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪದನಿಮಿತ್ತ ಜಿಬಿಎ ಉಪಾಧ್ಯಕ್ಷರಾಗಿದ್ದಾರೆ. ಅವರ ಅಧ್ಯಕ್ಷತೆಯಲ್ಲಾದರೂ ಸಭೆ ನಡೆಸಬಹುದಿತ್ತು. ಇಲ್ಲದಿದ್ದರೆ, ಅವರಿಬ್ಬರ ಅನುಪಸ್ಥಿತಿಯಲ್ಲಿ ಜಿಬಿಎ ಸಭೆಯಲ್ಲಿ ಹಾಜರಿರುವ ಸದಸ್ಯರು ತಾವೇ ಇತರ ಸದಸ್ಯರೊಬ್ಬರನ್ನು ಆಯ್ಕೆ ಮಾಡಿ ಸಭೆಯ ಅಧ್ಯಕ್ಷರನ್ನಾಗಿ ಮಾಡಿ, ಕಲಾಪಗಳನ್ನು ನಡೆಸಬಹುದು.
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರೇ ಜಿಬಿಎ ಸಭೆಗೆ ಮುಂದಾಗದಿರುವುದರಿಂದ ಕಾಯ್ದೆ ಉಲ್ಲಂಘನೆಯಾದರೂ ಸಚಿವರು, ಶಾಸಕರೂ ಸಭೆ ನಡೆಸುವ ಬಗ್ಗೆ ಹೆಚ್ಚಿನ ಒಲವು ತೋರಿಲ್ಲ.
‘ಜಿಬಿಎ ಸಭೆ ನಡೆಸುವ ಬಗ್ಗೆ ಉಪ ಮುಖ್ಯಮಂತ್ರಿಯವರೇ ನಿರ್ಧರಿಸಬೇಕು. ಅವರೇ ಅಲ್ಲವೇ ಬೆಂಗಳೂರಿನ ಇನ್‌ಚಾರ್ಜ್’ ಎಂದು ನಗರದ ಸಚಿವರೊಬ್ಬರು ಪ್ರತಿಕ್ರಿಯಿಸಿದರು.
ಸಾರ್ವಜನಿಕರಿಗೆ ಲಭ್ಯವಾಗದ ಮಾಹಿತಿ
2025ರ ಅಕ್ಟೋಬರ್ 10ರಂದು ನಡೆದ ಜಿಬಿಎಯ ಮೊದಲ ಸಭೆಯ ತೀರ್ಮಾನ ಹಾಗೂ ಸಂಕ್ಷಿಪ್ತ ಟಿಪ್ಪಣಿ ಸಾರ್ವಜನಿಕವಾಗಿ ಇನ್ನೂ ಲಭ್ಯವಾಗಿಲ್ಲ.
ಜಿಬಿಜಿಎ ಅಧ್ಯಾಯ–3ರ ಪ್ರಕರಣ– 12ರ 6ನೇ ಅಂಶದಂತೆ, ಜಿಬಿಎ ಸಭೆಯ ಎಲ್ಲ ತೀರ್ಮಾನಗಳು ಮತ್ತು ಸಂಕ್ಷಿಪ್ತ ಟಿಪ್ಪಣಿಗಳನ್ನು ದಾಖಲಿಸಬೇಕು. ಸಭೆಯ ಮುಗಿದ ಮೂರು ದಿನಗಳೊಳಗೆ ಅದನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಲಾಗಿದೆ. ಮೂರು ತಿಂಗಳಾದರೂ ಈ ಯಾವ ಮಾಹಿತಿಯೂ ಸಾರ್ವಜನಿಕವಾಗಿ ದೊರೆಯುತ್ತಿಲ್ಲ.
ಸಭೆ ಮಾಡಬೇಕಿತ್ತು, ಮುಖ್ಯಮಂತ್ರಿ– ಉಪ ಮುಖ್ಯಮಂತ್ರಿಯವರ ಸಮಯ ಪಡೆದು ಕೂಡಲೇ ಜಿಬಿಎ ಸಭೆ ನಡೆಸಲಾಗುತ್ತದೆ
ಮಹೇಶ್ವರ್ ರಾವ್, ಮುಖ್ಯ ಆಯುಕ್ತ, ಜಿಬಿಎ
ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್
ಪಾಲಿಕೆ ಆಯುಕ್ತ, ಸ್ಥಾಯಿ ಸಮಿತಿ, ಮೇಯರ್ ವೆಚ್ಚದ ಮಿತಿ ಏರಿಕೆ
ಬೆಂಗಳೂರು: ‘ನಗರ ಪಾಲಿಕೆಗಳ ಆಯುಕ್ತರು, ಮೇಯರ್ ಹಾಗೂ ಸ್ಥಾಯಿ ಸಮಿತಿಗಳ ವೆಚ್ಚ ಮಿತಿಯನ್ನು ಹೆಚ್ಚಿಸಿ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2025ರ ಅಕ್ಟೋಬರ್ 10ರಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರ ಪಾಲಿಕೆಯ ವೆಚ್ಚದ ಮಿತಿಯನ್ನು ₹1 ಕೋಟಿಯಿಂದ ₹ 3 ಕೋಟಿಗೆ ಏರಿಸಲಾಗಿದೆ. ಸ್ಥಾಯಿ ಸಮಿತಿ ವೆಚ್ಚದ ಮಿತಿಯನ್ನು ₹3 ಕೋಟಿಯಿಂದ ₹5 ಕೋಟಿಗೆ ಹಾಗೂ ಮೇಯರ್ ವೆಚ್ಚದ ಮಿತಿಯನ್ನು ₹5 ಕೋಟಿಯಿಂದ ₹10 ಕೋಟಿಗೆ ಹೆಚ್ಚಿಸಲಾಗಿದೆ’ ಎಂದರು.
‘ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ, ಟಿಡಿಆರ್ ನೀಡುವ ಅಧಿಕಾರವನ್ನು ಜಿಬಿಎಗೆ ನೀಡಲಾಗಿದೆ. ಬಿಡಿಎಯ ಈ ಅಧಿಕಾರವನ್ನು ಜಿಬಿಎಗೆ ಹಸ್ತಾಂತರಿಸಲಾಗಿದೆ.
‘ಜಿಬಿಎ ಜಾರಿಗೆ ತರುವಲ್ಲಿ ಶ್ರಮಿಸಿದ ಬಿ.ಎಸ್. ಪಾಟೀಲ್, ರವಿಚಂದ್ರನ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಗೆ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಹಾಗೂ ಮಹೇಶ್ವರ್ ರಾವ್ ಅವರ ತಂಡದ ಪರಿಶ್ರಮಕ್ಕೆ ಅಭಿನಂದನೆ ಸಲ್ಲಿಸಲಾಗುತ್ತದೆ. ರಿಜ್ವಾನ್ ಅರ್ಷದ್ ಅವರ ನೇತೃತ್ವದ ಸಮಿತಿ, ಜಿಬಿಜಿಎ ಆಡಳಿತ ಕಾಯ್ದೆಗೆ ವಿಧಾನಸಭೆ ಹಾಗೂ ಪರಿಷತ್ ಸದಸ್ಯರು ಇದಕ್ಕೆ ಸಹಕಾರ ನೀಡಿದ್ದು, ಎಲ್ಲಾ ಪಕ್ಷದ ಶಾಸಕರಿಗೆ ಅಭಿನಂದಿಸುವ ನಿರ್ಣಯ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.
ಸರ್ಕಾರದ ಶ್ರೀರಕ್ಷೆ: ‘ಪಾಲಿಕೆ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಪಕ್ಷ ಗೆದ್ದರೂ ಸರ್ಕಾರದ ಶ್ರೀರಕ್ಷೆ ಸದಾ ಪಾಲಿಕೆ ಮೇಲೆ ಇರಬೇಕು. ಎಲ್ಲಾ ಸಂದರ್ಭಗಳಲ್ಲಿ ಅನುದಾನದ ನೆರವು ಇರಬೇಕು ಎಂದು ಮುಖ್ಯಮಂತ್ರಿಯವರನ್ನು ಜಿಬಿಎ ಅಧ್ಯಕ್ಷರನ್ನಾಗಿ ಮಾಡಿದ್ದೇವೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.
‘ಎಲ್ಲಾ ಆಸ್ತಿ ಡಿಜಿಟಲೀಕರಣ ಮಾಡಲಾಗುತ್ತಿದ್ದು, ಸುಮಾರು ₹2 ಸಾವಿರ ಕೋಟಿ ಆದಾಯ ಹೆಚ್ಚಳದ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಈ ವರ್ಷ ₹6,200 ಕೋಟಿ ಆದಾಯ ಬಂದಿದ್ದು, ದೆಹಲಿಯಲ್ಲಿ ಕೇವಲ ₹2 ಸಾವಿರ ಕೋಟಿ ಮಾತ್ರ ಆದಾಯವಿದೆ’ ಎಂದರು.
ಅನಿವಾರ್ಯ ಕಾರಣ: ಜಿಬಿಎ ಸದಸ್ಯರೇ ಸಭೆಗೆ ಬಂದಿಲ್ಲ ಎಂದು ಕೇಳಿದಾಗ, ‘ಸಚಿವ ಕೃಷ್ಣ ಬೈರೇಗೌಡರು ಹಾಸನದಲ್ಲಿ ಹಾಸನಾಂಬ ದೇವರ ದರ್ಶನ ಕಾರ್ಯಕ್ರಮದ ಉಸ್ತುವಾರಿಯಲ್ಲಿದ್ದಾರೆ. ಬೈರತಿ ಸುರೇಶ್ ಅವರಿಗೆ ಶಸ್ತ್ರಚಿಕಿತ್ಸೆಯಾಗಿದೆ. ಇನ್ನು ಕೆಲವರು ಅನಿವಾರ್ಯ ಕಾರಣಗಳಿಂದ ಬಂದಿಲ್ಲ. ಉಳಿದಂತೆ ವಿರೋಧ ಪಕ್ಷದವರು ಎಲ್ಲರೂ ಗೈರಾಗಿದ್ದಾರೆ’ ಎಂದು ತಿಳಿಸಿದರು.
ಜಿಬಿಎ ಸಭೆಗೆ ಹಾಜರಾದವರು: ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್, ಜಮೀರ್ ಅಹ್ಮದ್ ಖಾನ್, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರೀಸ್, ಶಾಸಕರಾದ ಎಂ. ಕೃಷ್ಣಪ್ಪ, ಎ.ಸಿ. ಶ್ರೀನಿವಾಸ್, ರಿಜ್ವಾನ್ ಅರ್ಷದ್, ಬಿ.ಶಿವಣ್ಣ, ಯತೀಂದ್ರ ಸಿದ್ದರಾಮಯ್ಯ, ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಐದು ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ಜಿ.ಎಸ್. ರಮೇಶ್, ಕೆ.ಎನ್. ರಮೇಶ್, ಪೊಮ್ಮಲ ಸುನೀಲ್ ಕುಮಾರ್, ಡಾ.ಕೆ.ವಿ ರಾಜೇಂದ್ರ, ಬೆಸ್ಕಾಂ, ಬಿಡಿಎ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೊದಲ ಬಾರಿಗೆ ಸಿ.ಎಂ ನೇತೃತ್ವ
ಬೆಂಗಳೂರು ನಗರದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಯ ವಿಷಯ, ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಯಿತು.
ಬಿಬಿಎಂಪಿ ಕೌನ್ಸಿಲ್ ಸಭೆ ನಡೆಯುತ್ತಿದ್ದ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲಿಕೆಗಳಿಗೆ ಸಂಬಂಧಿಸಿದಂತೆ ಎರಡು ಕಾರ್ಯಸೂಚಿ ಹಾಗೂ 11 ವಿಷಯಗಳ ಬಗ ವಿಷಯ, ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ಮುಂಬೈ ಮಾದರಿಯಲ್ಲಿ ಕೊಳೆಗೇರಿ ಪುನಶ್ಚೇತನಕ್ಕೆ ಸಮಿತಿ’
ಬೆಂಗಳೂರು: ‘ಮುಂಬೈ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಬೇಕು’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಜಿಬಿಎ ಅಧಿಕಾರಿಗಳಿಗೆ ಸೂಚಿಸಿದರು.
ಜಿಬಿಎ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳೆಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕು ಎಂದು ವಿಷಯ ಪ್ರಸ್ತಾಪಿಸಿದಾಗ, ‘ಶಾಂತಿನಗರದಲ್ಲಿ ಈ ಪ್ರಯತ್ನಕ್ಕೆ ಮುಂದಾಗಿದ್ದೆವು. ಅದು ಯಶಸ್ವಿಯಾಗಲಿಲ್ಲ. ಹೀಗಾಗಿ ಜನರು ಈ ವಿಚಾರದಲ್ಲಿ ಹಿಂಜರಿಯುತ್ತಾರೆ. ಅದಕ್ಕಾಗಿ ಈ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ’ ಎಂದು ತಿಳಿಸಿದರು.
‘ನಮ್ಮ ಕ್ಷೇತ್ರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು ಇದಕ್ಕೆ ಪರಿಹಾರ ಬೇಕು. ಇದನ್ನು ಜಿಬಿಎ ನಿಭಾಯಿಸುವುದೇ ಅಥವಾ ಪಾಲಿಕೆ ನಿಭಾಯಿಸುವುದೇ’ ಎಂದು ಶಾಸಕ ಎ.ಸಿ. ಶ್ರೀನಿವಾಸ್ ಅವರು ಕೇಳಿದಾಗ, ‘ಕಸ ವಿಲೇವಾರಿ ವಿಚಾರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 33 ಪ್ಯಾಕೇಜ್ ಟೆಂಡರ್ ಕರೆಯಲಾಗುವುದು. ಕಸ ವಿಲೇವಾರಿ ಜವಾಬ್ದಾರಿ ಸ್ಥಳೀಯ ಪಾಲಿಕೆಗಳು ನಿಭಾಯಿಸಲಿವೆ. ಇದರ ಸಮನ್ವಯತೆಯನ್ನು ಜಿಬಿಎ ಪಾಲಿಸಲಿದೆ’ ಎಂದರು.
ಆನೇಕಲ್ ಶಾಸಕರು ತಮ್ಮ ಪ್ರದೇಶವನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ, ‘ಈಗ ಘೋಷಣೆ ಆಗಿರುವ ಜಿಬಿಎ ವ್ಯಾಪ್ತಿಯಲ್ಲಿ ಮೊದಲು ಚುನಾವಣೆ ಆಗಲಿದೆ. ನಂತರ ಎಲ್ಲೆಲ್ಲಿ ಅಭಿವೃದ್ಧಿ ಆಗಿದೆ ಆ ಜಾಗಗಳನ್ನು ಜಿಬಿಎ ವ್ಯಾಪ್ತಿಗೆ ಸೇರಿಸಲು ಸಮಿತಿ ರಚಿಸಿ ಯಾವ ಪ್ರದೇಶ ಸೇರಿಸಬೇಕು ಎಂದು ತೀರ್ಮಾನ ಮಾಡಲಾಗುವುದು. ಚುನಾವಣೆ ನಂತರ ಈ ಪ್ರಕ್ರಿಯೆಗೆ ಕೈಹಾಕಲಾಗುವುದು’ ಎಂದು ಹೇಳಿದರು.
ಪರಿಷತ್ ಸದಸ್ಯ ಗೋವಿಂದರಾಜು ಅವರು, ‘ಬೀದಿ ವ್ಯಾಪಾರಿಗಳಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ’ ಎಂದು ಕೇಳಿದಾಗ, ‘30 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿಯಾಗಿದ್ದು, ಅವರಿಗೆ ನಾಲ್ಕು ರೀತಿಯ ವಾಹನ ನೀಡಲು ಸಿದ್ಧತೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.
ಶಾಸಕ ರಿಜ್ವಾನ್ ಅರ್ಷದ್ ಅವರು, ‘ಅನಾಥ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಸಂಚಾರ ದಟ್ಟಣೆ ಹಾಗೂ ಕಸದ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ನಗರದ ಹೊರಗೆ 10 ಎಕರೆ ಪ್ರದೇಶ ಗುರುತಿಸಿ ಅಲ್ಲಿ ಈ ವಾಹನಗಳನ್ನು ಸ್ಥಳಾಂತರ ಮಾಡಬೇಕು’ ಎಂದರು. ‘ಈ ಜಾಗಗಳನ್ನು ಗುರುತಿಸಿ ಅಲ್ಲಿ ಕಾಂಪೌಂಡ್ ಹಾಕಿ ವಾಹನಗಳನ್ನು ಸ್ಥಳಾಂತರಿಸಿ. ಆಗ ಆ ವಾಹನಗಳನ್ನು ಬೇರೆಯವರು ಕದಿಯಲು ಆಗುವುದಿಲ್ಲ’ ಎಂದು ಶಿವಕುಮಾರ್ ಹೇಳಿದರು.
‘*ಲಾಲ್‌ಬಾಗ್ ಹಾಳು ಮಾಡಿದರೆ ನನ್ನ ತಲೆ ಒಡೆಯುತ್ತಾರೆ’
‘ಲಾಲ್‌ಬಾಗ್ ಹಾಳಾಗುವುದಿಲ್ಲ. ಅದನ್ನು ಹಾಳು ಮಾಡಿದರೆ ನನ್ನ ತಲೆ ಒಡೆದು ಹಾಕುತ್ತಾರೆ ಎಂಬುದು ನನಗೆ ಗೊತ್ತಿದೆ. ಸುರಂಗ ರಸ್ತೆ ಒಂದು ಮೂಲೆಯಲ್ಲಿ ಭೂಗರ್ಭದಲ್ಲಿ ಹೋಗುತ್ತದೆ. ಲಾಲ್‌ಬಾಗ್‌ಗೆ ಯಾವುದೇ ತೊಂದರೆಯಾಗುವುದಿಲ್ಲ, ತೊಂದರೆ ಮಾಡಲು ಆಗುವುದಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
‘ಉದ್ಯಾನದ ಒಂದು ಮೂಲೆಯಲ್ಲಿ ಕಲ್ಲು ಬಂಡೆಯಿದ್ದು ಅಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸುವಂತೆ ಯೋಜಿಸಲಾಗಿದೆ. ಆ ಪ್ರದೇಶವನ್ನು ನಾನು ವೀಕ್ಷಣೆ ಮಾಡುತ್ತೇನೆ. ಏನಾದರೂ ತೊಂದರೆಗಳು, ಬದಲಾವಣೆಗಳಿದ್ದರೆ ಅದನ್ನು ಮಾಡಿಕೊಳ್ಳೋಣ’ ಎಂದರು.
=
ಬಿ–ಸ್ಮೈಲ್ ಕಾಮಗಾರಿಗಳಿಗೆ ಜಿಬಿಎ ಮುದ್ರೆ
ನಗರದಲ್ಲಿ ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಲು ಬೆಂಗಳೂರು ಸ್ಮಾರ್ಟ್
ಇನ್‌ಫ್ರಾಸ್ಟ್ರಕ್ಚರ್ ನಿಯಮಿತದ (ಬಿ-ಸ್ಮೈಲ್) ಯೋಜನೆಗಳಿಗೆ ಜಿಬಿಎ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಯೋಜನೆಗಳ ವಿವರ:
₹45,000 ಕೋಟಿ; ಎರಡು ಸುರಂಗ ರಸ್ತೆ
₹18,204 ಕೋಟಿ; 126.44 ಕಿ.ಮೀ ಉದ್ದದ 13 ಎತ್ತರಿಸಿದ ಕಾರಿಡಾರ್‌ಗಳು
₹9,000 ಕೋಟಿ; 40 ಕಿ.ಮೀ ಉದ್ದದ ಮೆಟ್ರೊ ಸಂಯೋಜಿತ ಡಬ್ಬಲ್ ಡೆಕರ್
₹3,000 ಕೋಟಿ; ರಾಜಕಾಲುವೆಗಳ ಪಕ್ಕದಲ್ಲಿ ಸುಮಾರು 380 ಕಿಮೀ ಉದ್ದ ಬಫರ್ ಸರ್ವಿಸ್ ರಸ್ತೆ
₹1,700 ಕೋಟಿ; 145.86 ಕಿ.ಮೀ ಉದ್ದದ ರಸ್ತೆಗಳಲ್ಲಿ ಸಮಗ್ರ ಅಭಿವೃದ್ಧಿ, ವೈಟ್ ಟಾಪಿಂಗ್
₹400 ಕೋಟಿ; ವಿಶ್ವದರ್ಜೆಯ 20.50 ಕಿ.ಮೀ ಐ.ಟಿ ಕಾರಿಡಾರ್ ಹೊರವರ್ತುಲ ರಸ್ತೆ
* ವಿವಿಧ ಇಲಾಖೆ/ಸಂಸ್ಥೆಗಳೊಂದಿಗೆ ಈಜಿಪುರ ಮೇಲ್ಸೇತುವೆ ಕಾಮಗಾರಿ, ಬೈಯಪ್ಪನಹಳ್ಳಿ ರೋಟರಿ ಕಾಮಗಾರಿ, ಹೈಡೆನ್ಸಿಟಿ ಕಾರಿಡಾರ್ ಕಾಮಗಾರಿಗಳು
ಜಿಬಿಎ ಸಭೆಯಲ್ಲಿ ಅನುಮೋದನೆಯಾದ ವಿಷಯಗಳು
* ಜಿಬಿಎ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಧಿಕಾರಿಗಳ ಸಮಿತಿ ರಚಿಸಲು ಮುಖ್ಯ ಆಯುಕ್ತರಿಗೆ ಅಧಿಕಾರ
* ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ ಮಹಾಯೋಜನೆ (ಮಾಸ್ಟರ್ ಪ್ಲಾನ್) ತಯಾರಿಕೆಯನ್ನು ಬಿಡಿಎಯಿಂದ ಜಿಬಿಎಗೆ ಹಸ್ತಾಂತರ
* ಜಿಬಿಎಯಿಂದ ಟಿಡಿಆರ್/ಡಿಆರ್‌ಸಿ ಹಾಗೂ ಬಳಕೆ ಪ್ರಮಾಣ ಪತ್ರಗಳ ವಿತರಣೆ
* ಎಲ್ಲಾ ನಗರ ಪಾಲಿಕೆಗಳು ತಮ್ಮ ಕರಡು ವಾರ್ಷಿಕ ಆಯವ್ಯಯವನ್ನು ಜಿಬಿಎ ಪರಿಶೀಲನೆಗೆ ಸಲ್ಲಿಸಬೇಕು. ಜಿಬಿಎ ಮೂಲಕ ಸರ್ಕಾರದ ಅನುಮೋದನೆಗೆ ಕಳುಹಿಸಬೇಕು
* ಬೆಸ್ಕಾಂ, ಜಲಮಂಡಳಿ, ಬಿಎಂಟಿಸಿ, ಬೆಂಗಳೂರು ಸಂಚಾರ ಪೊಲೀಸರು, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು ಐದು ನಗರ ಪಾಲಿಕೆಗಳು ಹಾಗೂ 10 ವಲಯಗಳಲ್ಲಿ ಪ್ರತಿಯೊಂದಕ್ಕೂ ಸಂಪರ್ಕ ಬಿಂದು ಅಧಿಕಾರಿಯನ್ನು (ಪಿಒಸಿ) ನೇಮಿಸಬೇಕು
* ಜಿಬಿಎ ಕಾರ್ಯಕಾರಿ ಸಮಿತಿ ಕಾರ್ಯಕಾರಿ ಸಮಿತಿ, ಕೇಂದ್ರ ಸಂಯೋಜನಾ ಸಮಿತಿ ರಚನೆಗೆ ಅನುಮೋದನೆ
* ಐದು ನಗರ ಪಾಲಿಕೆಗಳ ಹೊಸ ಕಟ್ಟಡಗಳ ನಿರ್ಮಾಣ ಹಾಗೂ ತಾತ್ಕಾಲಿಕ ಕಾರ್ಯಾಚರಣೆ ಸ್ಥಳಗಳಿಗೆ ಸಮ್ಮತಿ
* ಜಿಬಿಎ ಮುಖ್ಯ ಆಯುಕ್ತರು ಪ್ರತಿ ವರ್ಷ ಅಗತ್ಯ ಅನುಮೋದನೆ ಮತ್ತು ಅನುದಾನಗಳ ಬಿಡುಗಡೆ ಏಕೀಕೃತ ಬಜೆಟ್ ಅನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಜಿಬಿಎ ವತಿಯಿಂದ ಸರ್ಕಾರದ ಅನುದಾನಗಳನ್ನು ಕಾರ್ಯತಂತ್ರದ ಹೂಡಿಕೆ ಯೋಜನೆಯಲ್ಲಿ (ಎಸ್ಐಪಿ) ನಿರ್ವಹಣೆ. ಐದು ನಗರ ಪಾಲಿಕೆಗಳಿಗೆ ₹613.6 ಕೋಟಿ ವಿತರಣೆಗೆ ಅನುಮೋದನೆ
* ಜಿಬಿಎ ಮುಖ್ಯ ಆಯುಕ್ತರು ₹10 ಕೋಟಿವರೆಗಿನ ಯೋಜನಾಗಳಿಗೆ ಅನುಮೋದನೆ ನೀಡಲು ಸಮ್ಮತಿ
ಎಲ್ಲೆಲ್ಲಿ ನಗರ ಪಾಲಿಕೆಗಳ ಹೊಸ ಕಟ್ಟಡ
ಕೇಂದ್ರ ನಗರ ಪಾಲಿಕೆ; ಅನೆಕ್ಸ್–3 ಕಟ್ಟಡ, ಜಿಬಿಎ ಆವರಣ
ಪೂರ್ವ ನಗರ ಪಾಲಿಕೆ; ಮಹದೇವಪುರ ಹೊರ ವರ್ತುಲ ರಸ್ತೆ ( ಮೆಟ್ರೊ ನಿಲ್ದಾಣದ ಬಳಿ)
ಪಶ್ಚಿಮ ನಗರ ಪಾಲಿಕೆ; ವಿಜಯನಗರ ಬಿಡಿಎ ಸಂಕೀರ್ಣ (1.5 ಎಕರೆ) ಅಥವಾ ಅತಿಗುಪ್ಪೆ (3.5 ಎಕರೆ)
ಉತ್ತರ ನಗರ ಪಾಲಿಕೆ: ಚೊಕ್ಕನಹಳ್ಳಿ ಗ್ರಾಮ, ಸರ್ವೆ ನಂಬರ್ 75/4 (2 ಎಕರೆ)
ದಕ್ಷಿಣ ನಗರ ಪಾಲಿಕೆ; ಬನಶಂಕರಿ ಮೆಟ್ರೊ ನಿಲ್ದಾಣದ ಹತ್ತಿರ (3 ಎಕರೆ ಖಾಲಿ ಜಾಗ)
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಥಮ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
ಸುಗಮ ಆಡಳಿತಕ್ಕೆ ಜಿಬಿಎ
ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ ಅಭಿವೃದ್ಧಿಗಾಗಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ) ಅಸ್ತಿತ್ವಕ್ಕೆ ಬಂದಿದೆ. ಅದರಡಿ ಐದು ನಗರ ಪಾಲಿಕೆಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ನಡೆದ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಮೊದಲ ಸಭೆಯಲ್ಲಿ ಮಾತನಾಡಿದ ಅವರು, ಜಿಬಿಎ ರಚನೆ ಹಿಂದಿನ ಉದ್ದೇಶಗಳನ್ನು ಪ್ರಸ್ತಾಪಿಸಿ, ನಗರದ ಸರ್ವತೋಮುಖ ಅಭಿವೃದ್ಧಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಪಾಲಿಕೆಯಿಂದ ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲು. ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಪಾಲಿಕೆಗಳಿಂದ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ, ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನಹರಿಸಲೇ ಇಲ್ಲ. ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್ ರಚಿಸಿ, ಅವರು ನೀಡಿದ ವರದಿಯಂತೆ ಮುಖ್ಯಮಂತ್ರಿ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ’ ಎಂದರು.
‘ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ, ಚರಂಡಿ, ಪಾದಚಾರಿ ಮಾರ್ಗ, ಉದ್ಯಾನಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಗಳೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಜಿಬಿಎ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.
‘ನಮ್ಮ ಗುರಿ ಮತ್ತು ಉದ್ದೇಶ ನೆರವೇರಲು ಜಲಮಂಡಳಿ, ಬಿಡಿಎ, ಬೆಸ್ಕಾಂ ಸೇರಿ ಎಲ್ಲಾ ಇಲಾಖೆಗಳು ಜಿಬಿಎ ಜೊತೆ ಪರಸ್ಪರ ಸಹಕಾರ, ಸಹಯೋಗವನ್ನು ಅತ್ಯಂತ ಕಡ್ಡಾಯವಾಗಿ ಆಚರಣೆಗೆ ತರಬೇಕು’ ಸೂಚಿಸಿದರು.
ಚರ್ಚೆ-ಸಂವಾದದಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಅಧಿಕಾರ ವಿಕೇಂದ್ರೀಕರಣ, ಬೆಂಗಳೂರಿನ ಅಭಿವೃದ್ಧಿ ಒಲ್ಲದವರು ಸಭೆಯನ್ನು ವಿರೋಧಿಸುತ್ತಾರೆ
ಸಿದ್ದರಾಮಯ್ಯ, ಮುಖ್ಯಮಂತ್ರಿ
ಪಾಲಿಕೆ ಚುನಾವಣೆ ಬಹಿಷ್ಕರಿಸಲಿ: ಡಿಕೆಶಿ
‘ಬಿಜೆಪಿಯವರು ಜಿಬಿಎ ವಿರುದ್ಧ ಪ್ರತಿಭಟಿಸುವುದೇ ಆದರೆ, ಅವರು ನಗರ ಪಾಲಿಕೆಗಳ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಹಿಷ್ಕರಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಬಿಎ ರದ್ದು ಮಾಡಲಾಗುವುದು, ಸಭೆಯ ಅಜೆಂಡಾವನ್ನೇ ತಿಳಿಸಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರಲ್ಲಾ’ ಎಂಬ ಸುದ್ದಿಗಾರರರು ಕೇಳಿದಾಗ, ‘ಅವರು ಏನಾದರೂ ಟೀಕೆ ಮಾಡಲಿ ನಾವು ನಮ್ಮ ಜನಪರ ಕೆಲಸ ಮುಂದುವರಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.
‘ಕಾಂಗ್ರೆಸ್ ಸರ್ಕಾರದ ತೀರ್ಮಾನವನ್ನು ಯಾವುದೇ ಬೇರೆ ಸರ್ಕಾರ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಭೂಸುಧಾರಣಾ ಕಾಯ್ದೆಯಿಂದ ಬ್ಯಾಂಕುಗಳ ರಾಷ್ಟ್ರೀಕರಣ, ಆಹಾರ ಭದ್ರತೆ, ಉದ್ಯೋಗ ಖಾತ್ರಿ, ಶೈಕ್ಷಣಿಕ ಹಕ್ಕು ಸೇರಿದಂತೆ ಗ್ಯಾರಂಟಿ ಯೋಜನೆಗಳವರೆಗೂ ಕಾಂಗ್ರೆಸ್ ಸರ್ಕಾರಗಳ ತೀರ್ಮಾನವನ್ನು ಬದಲಿಸಲು ಸಾಧ್ಯವಾಗಿಲ್ಲ’ ಎಂದು ಹೇಳಿದರು.
‘ಮೊದಲ ಸಭೆಯಲ್ಲಿ ಅಜೆಂಡಾ ಇರುವುದಿಲ್ಲ. ಜಿಬಿಎ ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ತೀರ್ಮಾನ ಮಾಡಲಾಗುತ್ತದೆ. ಆದರೆ, ಸಭೆಗೆ ಗೈರಾಗುವ ಮೂಲಕ ಬಿಜೆಪಿ ನಾಯಕರು ಬೆಂಗಳೂರು ನಗರದ ವಿರುದ್ಧವಾಗಿ ನಿಂತಿದ್ದಾರೆ. ಜನರು ಕೊಟ್ಟ ಅಧಿಕಾರಕ್ಕೆ ದ್ರೋಹ ಬಗೆದಿದ್ದಾರೆ. ಜನರ ಪರವಾಗಿ ಧ್ವನಿ ಎತ್ತುವುದಕ್ಕಿಂತ ಅವರಿಗೆ ರಾಜಕಾರಣ ಮುಖ್ಯವಾಗಿದೆ. ಅವರ ಈ ನಡೆಗೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದರು.
ಜಿಬಿಎ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ
ಬೆಂಗಳೂರು: ಬೆಂಗಳೂರಿಗೆ ಮಾರಕವಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಪಕ್ಷದ ಶಾಸಕರ ಜತೆಗೂಡಿ ಸಭೆಯನ್ನು ಬಹಿಷ್ಕರಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಈಗಾಗಲೇ ಕೌನ್ಸಿಲ್‌ನಲ್ಲಿ ಹೋರಾಟ ಮಾಡಿದ್ದೇವೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ಹಾಕಿದ್ದೇವೆ’ ಎಂದರು.
‘ಇದು ಬೆಂಗಳೂರು ಜನಪ್ರತಿನಿಧಿಗಳ ಕತ್ತು ಹಿಸುಕುವ ಮತ್ತು ಕಾನೂನು ಬಾಹಿರ ಕ್ರಮವಾಗಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿರುವುದರಿಂದ, ಇಂತಹ ಸಭೆಗೆ ಹೋಗಲು ಸಾಧ್ಯವಿಲ್ಲ’ ಎಂದು ಹೇಳಿದರು.
‘ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಯವರಿಗೆ ನೀಡಲಾಗಿದೆ. ಕೌನ್ಸಿಲ್‌ಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇದು ಸಂವಿಧಾನ ವಿರೋಧವಾಗಿರುವುದರಿಂದ ಸಭೆಯನ್ನು ಬಹಿಷ್ಕಾರ ಮಾಡಿದ್ದೇವೆ’ ಎಂದರು.
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಸೃಷ್ಟಿಸಿರುವ ಜಿಬಿಎ ಸಂಪೂರ್ಣವಾಗಿ ಸ್ಥಳೀಯ ಸಂಸ್ಥೆಗಳ ಅಧಿಕಾರ ಕಿತ್ತುಕೊಳ್ಳುವ ಪ್ರಾಧಿಕಾರವಾಗಿದೆ ಎಂದು ಹೇಳಿದರು.
ಬಿಬಿಎಂಪಿ ಅಡಿಯಲ್ಲಿ ಚುನಾವಣೆ ಮಾಡಿದ್ದರೆ ಗೆಲ್ಲುವುದಿಲ್ಲ ಎಂಬ ಕಾರಣಕ್ಕೆ ಜಿಬಿಎ ಮಾಡಿದ್ದಾರೆ. ಐದು ಪಾಲಿಕೆಗಳಲ್ಲಿ ಕನಿಷ್ಠ ಒಂದೆರಡಾದರೂ ಗೆಲ್ಲಬೇಕು ಎಂಬುದೇ ಅವರ ಉದ್ದೇಶ ಎಂದರು.

No comments:
Post a Comment